ಗೆಲ್ಲುವ ಕುದುರೆ ನಾನೆ… ಬಿಜೆಪಿ ಟಿಕೆಟ್ ನನಗೆ ಆಕಾಂಕ್ಷಿಗಳಿಗೆ ಶಾಸಕ ಓಲೇಕಾರ ತಿರುಗೇಟು

Date:

ಶಾಸಕ ನೆಹರು ಓಲೇಕಾರ

ಗೆಲ್ಲುವ ಕುದುರೆ ನಾನೆ… ಬಿಜೆಪಿ ಟಿಕೆಟ್ ನನಗೆ
ಆಕಾಂಕ್ಷಿಗಳಿಗೆ ಶಾಸಕ ಓಲೇಕಾರ ತಿರುಗೇಟು
ಹಾವೇರಿ: ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವು ಕುದುರೆನಾನೆ, ನನ್ನನ್ನುಬಿಟ್ಟು ಬೇರೇಯಾರಿಗೆ ಟಿಕೆಟ್ ನೀಡುತ್ತಾರೆ. ಚುನಾವಣೆ ಎಂದ ಮೇಲೆ
ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುತ್ತದೆ. ರಾಜ್ಯ ವಿಧಾನಸಭಾ ಚುನಾವಣೆಯು ಮಹತ್ವದ ಚುನಾವಣೆಯಾಗಿದ್ದು, ಕ್ಷೇತ್ರದಲ್ಲಿ ಗೆಲ್ಲುವ
ಕುದುರೆ ನಾನೆ. ಹೀಗಾಗಿ ಟಿಕೆಟ್‌ನ್ನು ವರಿಷ್ಠರು ನನಗೆ ನೀಡುತ್ತಾರೆ ಎಂದು ಶಾಸಕ ನೆಹರು ಓಲೇಕಾರ ತಿಳಿಸಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾವೇರಿ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿರುವೆ.
ಚುನಾವಣೆ ಹತ್ತಿರ ಬಂದಾಗ ಆಕಾಂಕ್ಷಿಗಳು ಇರುತ್ತಾರೆ. ಕಳೆದ ಚುನಾವಣೆಯಲ್ಲಿ ೧೬ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಟಿಕೆಟ್ ಆಕಾಂಕ್ಷಿಗಳಿದ್ದರು.
ಪ್ರಸಕ್ತ ಚುನಾವಣೆಯ ಸಂದರ್ಭದಲ್ಲಿ ಈಸಂಖ್ಯೆ ೧೪ಕ್ಕೆ ಇಳಿದಿದೆ. ಟಿಕೆಟ್ ಆಕಾಂಕ್ಷಿಗಳು ಸಹ ನಮ್ಮವರೆ ಆಗಿದ್ದಾರೆ. ಯಾರಢ ಆಕಾಂಕ್ಷಿಗಳು ಇದ್ದರೂ ಸಹ ವರಿಷ್ಠರು ನನಗೆ ಬಿಜೆಪಿ ಟಿಕೆಟ್ ನೀಡುತ್ತಾರೆ ಎಂದು ನೆಹರು
ಓಲೇಕಾರ ವಿಶ್ವಾಸ ವ್ಯಕ್ತಪಡಿಸಿದರು. ಆಮೂಲಕ ಟಿಕೆಟ್ ಆಕಾಂಕ್ಷಿಗಳಿಗೆ ತಿರುಗೇಟು ನೀಡಿದ್ದಾರೆ.

ಹಾವೇರಿ: ಜಿಲ್ಲೆಯ ಯಾವ ಬಿಜೆಪಿ ಶಾಸಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸಂಪರ್ಕದಲ್ಲಿ ಇಲ್ಲಾ. ವಿನಾಕಾರಣ ಊಹಾಪೋಹಗಳನ್ನು ಹಬ್ಬಿಸುವ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಅವರು ಹೇಳಿದ ಮಾತಿನಲ್ಲಿ ಸತ್ಯಾಂಶವಿದ್ದರೆ ಯಾವ ಶಾಸಕರು ಅವರ ಸಂಪರ್ಕದಲ್ಲಿದ್ದಾರೆ? ಏನು ಮಾತುಕತೆಯಾಗಿದೆ ಎಂಬುವುದನ್ನು ಬಹಿರಂಗ ಪಡಿಸಲಿ ಎಂದು ಶಾಸಕ ನೆಹರು ಓಲೇಕಾರ ಡಿಕೆಶಿಗೆ ಸವಾಲು ಹಾಕಿದರು. ಜ.19 ರಂದು ನಗರದಲ್ಲಿ ಜರುಗಿದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯ ಸಮಾವೇಶದಲ್ಲಿ ಡಿಕೆಶಿ ಸಿಎಂ ತವರು ಜಿಲ್ಲೆಯ ಶಾಸಕರು ಕಾಂಗ್ರೆಸ್ ಸೇರಲು ನನ್ನ ಸಂಪರ್ಕದಲ್ಲಿ ಇದ್ದಾರೆ. ಪಕ್ಷದಲ್ಲಿ ಅವರು ಕೂರಲು ಚೇರ ಖಾಲಿ ಇಲ್ಲದ ಕಾರಣ ಅವರಿಗೆ ಸ್ವಲ್ಪ ದಿನಗಳ ಕಾಲ ತಡೆಯುವಂತೆ ಸೂಚಿಸಿದ್ದೇನೆ ಎಂದು ನೀಡಿರುವ ಹೇಳಿಕೆಯಲ್ಲಿ ಸತ್ಯಾಂಶವಿಲ್ಲ. ಗಿಡಕ್ಕೆ ಕಲ್ಲು ಹೊಡೆದು ನೋಡುವ ಕೆಲಸವನ್ನು ಡಿಕೆಶಿ ಮಾಡುತ್ತಾರೆ. ಮುಂಜಾನೆ ಒಂದು ಹೇಳಿಕೆ ನೀಡಿದರೆ ಸಂಜೆ ಮತ್ತೊಂದು ರೀತಿಯ ಹೇಳಿಕೆ ನೀಡುತ್ತಾರೆ. ಕಾಂಗ್ರೆಸ್ ತೊರೆದು ಅನೇಕರು ಬಿಜೆಪಿ ಸೇರುತ್ತಿರುವ ಸಂದರ್ಭದಲ್ಲಿ ಬಿಜೆಪಿಯ ಯಾವ ಶಾಸಕರು ಕಾಂಗ್ರೆಸ್ ಸೇರುವ ಪ್ರಶ್ನೆ ಉದ್ಭವಿಸುವುದಿಲ್ಲ. ಬಿಜೆಪಿಯ ಯಾವ ಶಾಕರು ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿ ಇಲ್ಲಾ. ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ಅವರು ಬಿಜೆಪಿ ನಾಯಕರ ತೇಜೋವಧೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.ಡಿಕೆಶಿ ಕಾಂಗ್ರೆಸ್ ರಾಜ್ಯ ನಾಯಕನಾಗಿದ್ದರೂ ಅವರ ಮಾತಿನಲ್ಲಿ ಹಿಡಿತವಿಲ್ಲಾ. ಸುಳ್ಳು ಮಾತುಗಳನ್ನು ಆಡಿ ಅವರ ಗೌರವವನ್ನು ಅವರೆ ಹಾಳು ಮಾಡಿಕೊಂಡಿದ್ದಾರೆ. ನಾನು ವೈಯಕ್ತಿಕವಾಗಿ ಅವರ ಸಂಪರ್ಕದಲ್ಲಿ ಇಲ್ಲಾ ಎಂದು ಸ್ಪಷ್ಟಪಡಿಸಿದರು.

ನಗರದ ಹೊರವಲಯದಲ್ಲಿ ನಿರ್ಮಾಣಗೊಂಡಿರುವ 1,112 ಜಿ+ ಮಾದರಿ ಮನೆಗಳನ್ನು ಮಾಜಿ ಸಚಿವ ರುದ್ರಪ್ಪ ಲಮಾಣಿ ಅಧಿಕಾವಧಿಯಲ್ಲಿ ₹ 25 ರಿಂದ 30 ಸಾವಿರ ಲಂಚ ಪಡೆದು ಮನೆ ಇದ್ದವರು ಹಾಗೂ ಗ್ರಾಮೀಣ ಭಾಗದಲ್ಲಿ ವಾಸವಾಗಿರುವವರು ಸೇರಿದಂತೆ ಸುಮಾರು 700 ಕ್ಕೂ ಅಧಿಕ ಜನರಿಗೆ ಹಂಚಿಕೆ ಮಾಡಿದ್ದರು. ಈ ಬಗ್ಗೆ ಅಧಿಕಾರಿಗಳಿಗೆ ಪರಿಶೀಲನೆ ಮಾಡಿಸಿದಾಗ ಸತ್ಯಾಂಶ ಗೊತ್ತಾಗಿದೆ. ಹಾಗಾಗಿ ಫಲಾನುಭವಿಗಳ ಪಟ್ಟಿಯನ್ನು ಪುನಃ ತಯಾರಿಸಿ ಮನೆ ಇಲ್ಲದವರು ಹಾಗೂ ಬಾಡಿಗೆ ಮನೆಯಲ್ಲಿ ವಾಸಿಸುವವರಿಗೆ ಹೊಸದಾಗಿ ಹಂಚಿಕೆ ಮಾಡಲಾಗಿದ್ದು, ಆಯ್ಕೆಯಾದ ಫಲಾನುಭವಿಗಳಿಗೆ ಹಕ್ಕು ಪತ್ರವನ್ನು ಶೀಘ್ರದಲ್ಲೇ ನೀಡಲಾಗುತ್ತದೆ ಎಂದರು.

ಮೆಡಿಕಲ್ ಕಾಲೇಜ್ ನ ಮೊದಲ ಹಂತ ಪೂರ್ಣಗೊಂಡಿದ್ದು, ಅತೀ ಶೀಘ್ರವಾಗಿ ಉದ್ಘಾಟಿಸಲಾಗುತ್ತದೆ. ನಗರದ ಪ್ರವಾಸಿ ಮಂದಿರ ನಿರ್ಮಾಣಕ್ಕೆ ₹ 10 ಕೋಟಿ ಹಾಗೂ ಗುತ್ತಲ ಪ್ರವಾಸಿ ಮಂದಿರ ನಿರ್ಮಾಣಕ್ಕೆ ₹3 ಕೋಟಿ ಹಣ ಮಂಜೂರಾಗಿದೆ. ಹಾವೇರಿ- ಗುತ್ತಲ ರಸ್ತೆ ನಿರ್ಮಾಣಕ್ಕೆ ₹ 20 ಕೋಟಿ ಮಂಜೂರಾಗಿದ್ದು, ಶೀಘ್ರವಾಗಿ ಟೆಂಡರ್ ಕರೆಯಲಾಗುತ್ತದೆ ಎಂದು ಶಾಸಕ ನೆಹರು ಓಲೇಕಾರ ತಿಳಿಸಿದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ ಹಾವೇರಿ: ೨೦೨೮ ವಿಧಾನಸಭೆ ಚುನಾವಣೆಯಲ್ಲಿ...

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...