ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ಒತ್ತು: ತಿಮ್ಮಾಪುರ

Date:

ಹಾವೇರಿ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಂಡಿಸಿದ ೨೦೨೨-೨೩ನೇ ಸಾಲಿನ ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ವಿವಿಧ ಘೋಷಣೆಗಳನ್ನು ಮಾಡುವ ಮೂಲಕ ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ವಿಶೇಷವಾಗಿ ಒತ್ತು ನೀಡಿದ್ದಾರೆ. ಅಲ್ಪಸಂಖ್ಯಾತ ಸಮುದಾಯಗಳಲ್ಲೇ ಹಿಂದುಳಿದವರು ಎಂದು ಗುರ್ತಿಸಿಕೊಂಡಿರುವ ಪಿಂಜಾರ, ದರ್ವೇಸು, ನದಾಫ್ ಸೇರಿದಂತೆ ಹಲವು ಸಮುದಾಯಗಳ ಅಭಿವೃದ್ಧಿಗೆ ಆದ್ಯತೆ ನೀಡಲು ತೀರ್ಮಾನಿಸಿರುವುದನ್ನು ರಾಜ್ಯ ಬಿಜೆಪಿ ಮೈನಾರಿಟಿ ಮೋರ್ಚಾ ರಾಜ್ಯ ಕಾರ್ಯದರ್ಶಿ, ಹಾವೇರಿಜಿಲ್ಲಾ ವಕ್ಪ ಭೋರ್ಡ ಮಾಜಿ ಅಧ್ಯಕ್ಷ ಅಲ್ಲಾಭಕ್ಷ ತಿಮ್ಮಾಪುರ ಸ್ವಾಗತಿಸಿದ್ದಾರೆ.
ಬಜೆಟ್‌ನಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೂ ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಬಜೆಟ್ ನಲ್ಲಿ ಮುಸ್ಲಿಂ ಸಮುದಾಯಕ್ಕೆ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಘೋಷಣೆ ಜತೆಗೆ ಪದವಿ ಪೂರ್ವ ತರಗತಿಯೂ ಪ್ರಾರಂಭ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಸಮುದಾಯಗಳ ಅಭಿವೃದ್ಧಿಗೆ ೫೦ ಕೋಟಿ ರೂ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಪ್ರತೀ ಜಿಲ್ಲೆಯ ಕನಿಷ್ಠ ಒಂದು ಶಾಲೆಯಲ್ಲಿ ಪಿಯುಸಿ ತರಗತಿಗಳು ಆರಂಭಕ್ಕೆ ಕ್ರಮ, ಇಲ್ಲಿ ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್, ವಿಜ್ಞಾನ ಪ್ರಯೋಗಾಲಯಗಳನ್ನು ಒದಗಿಸಲು ಕ್ರಮ, ಈ ಶಾಲೆಗಳನ್ನು ಎಪಿಜೆ ಅಬ್ದುಲ್ ಕಲಾಂ ಶಾಲೆಗಳೆಂದು ನಾಮಕರಣ ಮಾಡಿ ಸಿಬಿಎಸ್‌ಇ ಮಾನ್ಯತೆ ಪಡೆಯಲು ೨೫ ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ.
ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ೧೦೦ ವಿದ್ಯಾರ್ಥಿನಿಲಯಗಳಲ್ಲಿ ತಲಾ ೨೫ ದಾಖಲಾತಿ ಸಂಖ್ಯೆ ಹೆಚ್ಚಳಕ್ಕೆ ೧೦ ಕೋಟಿ ಅನುದಾನ, ವಕ್ಫ್ ಆಸ್ತಿಗಳ ರಕ್ಷಣೆಗೆ ಕ್ರಮ. ಇದಕ್ಕಾಗಿ ಅತ್ಯಾಧುನಿಕ ತಂತ್ರಜ್ಞಾನ, ಡ್ರೋಣ್ ತಂತ್ರಜ್ಞಾನ ಬಳಸಿ ಸರ್ವೆ, ಶಾಸ್ತ್ರೀಯ ಭಾಷೆಗಳ ಉತ್ಕೃಷ್ಟ ಸಾಹಿತ್ಯಿಕ ಪುಸ್ತಕಗಳನ್ನು ಉರ್ದು ಭಾಷೆಗೆ ಅನುವಾದ. ಉರ್ದು ಅಕಾಡೆಮಿಯಿಂದ ಕ್ರಮ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ನೋಂದಾಯಿತ ಬೀದಿ ಬದಿ, ತಳ್ಳುಗಾಡಿ, ಹೂ ಹಣ್ಣು ತರಕಾರಿ ಮಾರಾಟಗಾರರು, ಆಟೋ ಚಾಲಕರಿಗೆ ಆರ್ಥಿಕ ಸಹಾಯಧನ ಅಲ್ಪಸಂಖ್ಯಾತ ಸಮುದಾಯವಿರುವ ಕೊಳಚೆ ಪ್ರದೇಶಗಳ ಅಭಿವೃದ್ಧಿ ಘೋಷಣೆಮಾಡಲಾಗಿದ್ದು, ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ಒತ್ತು ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ತಿಮ್ಮಾಪುರ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು ಹೊರಟಿದ್ದು...

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ ಹಾವೇರಿ : ಹಾವೇರಿನಗರದಲ್ಲಿ ಕಳೆದ ವಾರದಿಂದ...

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ ಹಾವೇರಿ: ಯುವ ಜನಾಂಗ...