
ಎಸ್.ಆರ್. ನಂದಿಹಳ್ಳಿಗೆ ’ಮೂಡಣ’ ದತ್ತಿನಿಧಿ ವಾರ್ಷಿಕ ಪ್ರಶಸ್ತಿ
ಹಾವೇರಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ನೀಡುವ ಪ್ರತಿಷ್ಠಿತ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.ಪತ್ರಿಕೋದ್ಯಮದಲ್ಲಿ ವೃತ್ತಿ ಸೇವೆ, ಸಾಮಾಜಿಕ ಬದ್ಧತೆ ಹಾಗೂ ಸಾಧನೆಯನ್ನು ಗುರುತಿಸಿ ನೀಡಲಾಗುವ ಈ ಪ್ರಶಸ್ತಿಯು ಪ್ರಶಸ್ತಿ ಫಲಕ, ಪ್ರಶಸ್ತಿ ಪತ್ರ, ರೂ.೫,೦೦೦ ನಗದು ಹಾಗೂ ಕೆಯುಡಬ್ಲ್ಯೂಜೆ ಗೌರವಾದರವನ್ನು ಒಳಗೊಂಡಿದೆ. ಈ ಬಾರಿ ’ಮೂಡಣ’ ಹಾವೇರಿ ವಿಭಾಗದ ಪ್ರಶಸ್ತಿಗೆ ಎಸ್.ಆರ್. ನಂದಿಹಳ್ಳಿ, ಡಿಡಿ೧ (ದೂರದರ್ಶನ), ಹಾವೇರಿ ಅವರು ಆಯ್ಕೆಯಾಗಿದ್ದಾರೆ.
ಎಸ್.ಆರ್. ನಂದಿಹಳ್ಳಿ ಅವರ ಪತ್ರಿಕೋದ್ಯಮದ ಸೇವೆಯನ್ನು ಗುರುತಿಸಿ ನೀಡಲಾಗಿರುವ ಈ ಪ್ರಶಸ್ತಿಗೆ ಜಿಲ್ಲೆಯ ಪತ್ರಕರ್ತರು, ಸ್ನೇಹಿತರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಜುಲೈ ೨೫ರಂದು ನಡೆಯಲಿರುವ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿವಿಧ ವಿಭಾಗಗಳ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹಾಗೂ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

