
ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಅವರಿಗೆ ಅಭಿನಂದನಾ ಪತ್ರ
ಹಾವೇರಿ: ಅಟಲ್ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿಯಲ್ಲಿ ರಾಜ್ಯದ ಸಾರ್ವಜನಿಕರಿಗೆ ವಿವಿಧ ಪ್ರಮಾಣ ಪತ್ರಗಳ ಸೇವೆಯನ್ನು ನೀಡಲು ಹಾವೇರಿ ಜಿಲ್ಲೆಯ ನಾಡಚೇರಿಗಳಲ್ಲಿ ಏಪ್ರಿಲ್-೨೦೨೬ರ ಮಾಹೆಯಲ್ಲಿ ಸ್ವೀಕರಿಸಲಾಗಿರುವ ೨೫೯೬೪ ಅರ್ಜಿಗಳನ್ನು ನಿಗದಿತ ಅವಧಿಗಿಂತ ಮೊದಲೇ ಶೇ. ೯೯.೯೭ ರ? ವಿಲೇವಾರಿ ಮಾಡಿ ೬.೮೪ ಸಿನ್ಮಾ ಮೌಲ್ಯವನ್ನು ಪಡೆದಿರುತ್ತೀರಿ. ೭.೭೮ ವಿಲೇವಾರಿ ಸೂಚ್ಯಂಕದ (ಆisಠಿosಚಿಟ Iಟಿಜex) ಪ್ರಕಾರ ಹಾವೇರಿ ಜಿಲ್ಲೆಯಲ್ಲಿ ೮.೭೮ ಪಟ್ಟು ನಿಗಧಿತ ಅವಧಿಗಿಂತ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ, ಏಪ್ರಿಲ್-೨೦೨೬ರ ಮಾಹೆಯಲ್ಲಿ ಹಾವೇರಿ ಜಿಲ್ಲೆಯು ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ ಅವರಿಗೆ ಕಂದಾಯ ಇಲಾಖೆ ಆಯುಕ್ತರಾದ ಸಿ.ಎನ್. ಮೀನಾ ನಾಗರಾಜ್ ಅವರು ಅಭಿನಂದನಾ ಪತ್ರ ಕಳುಹಿಸಿದ್ದಾರೆ.
ನಿಮ್ಮ ಜಿಲ್ಲೆಯಲ್ಲಿನ ಈ ಕಾರ್ಯ ಸಾಧನೆಗೆ ನಿಮ್ಮ ಹಾಗೂ ನಿಮ್ಮ ನಾಡಕಛೇರಿ/ಅಟಲ್ಜೀ ಜನಸ್ನೇಹಿ ಕೇಂದ್ರದ ಸಿಬ್ಬಂದಿಗಳ ಸಹಕಾರ, ಕಾರ್ಯತತ್ಪರತೆ ಕಾರಣವಾಗಿರುತ್ತದೆ. ಆದ್ದರಿಂದ, ಅಟಲ್ಜೀ ಜನಸ್ನೇಹಿ ನಿರ್ದೇಶನಾಲಯದ ಪರವಾಗಿ ನಿಮ್ಮ ತಂಡಕ್ಕೆ ನನ್ನ ಅಭಿನಂದನೆಯನ್ನು ವ್ಯಕ್ತಪಡಿಸಲು ಇಚ್ಛಿಸುತ್ತೇನೆ. ಇನ್ನು ಮುಂದಿನ ದಿನಗಳಲ್ಲಿಯೂ ಸಹಾ ನಿಮ್ಮಿಂದ ಇದೇ ರೀತಿಯ ಸಹಕಾರ ಹಾಗೂ ಕಾರ್ಯಕ್ಷಮತೆಯನ್ನು ನಿರೀಕ್ಷಿಸುತ್ತೇನೆ ಎಂದು ಅಭಿನಂದನಾ ಪತ್ರದಲ್ಲಿ ತಿಳಿಸಿದ್ದಾರೆ.

