ಶಾಸಕ ನೆಹರು ಓಲೇಕಾರ್‌ಗೆ ಜಾಮೀನು ನೀಡಿ ಹೈಕೋರ್ಟ್ ಆದೇಶ

Date:

ಶಾಸಕ ನೆಹರು ಓಲೇಕಾರ್‌ಗೆ ಜಾಮೀನು ನೀಡಿ ಹೈಕೋರ್ಟ್ ಆದೇಶ
ಬೆಂಗಳೂರು : ಬಿಜೆಪಿ ಶಾಸಕ ನೆಹರೂ ಓಲೆಕಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜಾಮೀನು ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಭ್ರಷ್ಟಾಚಾರ ತಡೆ ಕಾಯಿದೆಯಡಿ ನೆಹರು ಓಲೇಕಾರ್ ಗೆ ೨ ವರ್ಷ ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿತ್ತು. ಇದೀಗ ಶಿಕ್ಷೆ ಅಮಾನತಿನಲ್ಲಿಟ್ಟು ಜಾಮೀನು ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಅರ್ಜಿದಾರರ ಪರ ವಾದಿಸಿದ ವಕೀಲ ಆರ್.ಸ್ವರೂಪ ಆನಂದ್, ಪ್ರಕರಣ ಸಂಬಂಧ ಅರ್ಜಿದಾರರ ವಿರುದ್ಧ ದೂರು ದಾಖಲಿಸಲು ದೂರುದಾರರು ಸಕ್ಷಮ ಪೂರ್ವಾನಮತಿ ಪ್ರಾಧಿಕಾರದಿಂದ ಪೂರ್ವಾನು ಮತಿ ಪಡೆಯದೇ ಸಲ್ಲಿಸಿದ್ದ ದೂರನ್ನು ವಿಚಾರಣೆ ನಡೆಸಿ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಶಿಕ್ಷೆ ಹಾಗೂ ದಂಡ ವಿಧಿಸಿದ ವಿಚಾರಣಾ ನ್ಯಾಯಾ ಲಯದ ಕ್ರಮ ಕಾನೂನುಬಾಹಿರ. ಇನ್ನು, ಪ್ರಕರಣದ ಇತರೆ ಆರೋಪಿಗಳ ಜತೆ ಅರ್ಜಿ ದಾರ ಶಾಸಕರು ಅಪರಾಧಿಕ ಒಳಸಂಚು ರೂಪಿಸಿಲ್ಲ. ಆದ್ದರಿಂದ ಅರ್ಜಿದಾರರನ್ನು ದೋಷಿ ಯಾಗಿ ತೀರ್ಮಾನಿಸಿ ಮತ್ತು ಶಿಕ್ಷೆ ವಿಧಿಸಿ ವಿಚಾರಣಾ ನ್ಯಾಯಾಲಯ ಹೊರಡಿ ಸಿದ ಆದೇಶವನ್ನು ಅಮಾನತಿನಲ್ಲಿರಿಸಬೇಕು. ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದ್ದರು.
ಓಲೇಕಾರ್‌ಗೆ ಎರಡು ವರ್ಷ ಸಾಧಾರಣ ಜೈಲು ಶಿಕ್ಷೆ ಮತ್ತು ಎರಡು ಸಾವಿರ ರೂ. ದಂಡ ವಿಧಿಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ೨೦೨೩ರ ಫೆ.೧೩ರಂದು ಹೊರಡಿಸಿದ್ದತೀರ್ಪು ಅಮಾನತಿನಲ್ಲಿಟ್ಟು ಮತ್ತು ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ. ತೀರ್ಪು ರದ್ದು ಕೋರಿ ನೆಹರು ಓಲೇಕಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅವರಿದ್ದ ಏಕಸದಸ್ಯಪೀಠ, ಈ ಆದೇಶ ಮಾಡಿದೆ.
ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್ ಹಾಗೂ ಅವರ ಇಬ್ಬರು ಪುತ್ರರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ೫೦ ಲಕ್ಷ ರೂ. ಮೊತ್ತದ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದೆ ಮತ್ತು ಕಾಂಕ್ರೀಟ್ ರಸ್ತೆ ಸೇರಿದಂತೆ ಕೆಲ ಕಾಮಗಾರಿಯಲ್ಲಿ ಶಾಸಕ ಓಲೆಕಾರ್ ಅವರು ಸ್ವಜನ ಪಕ್ಷಪಾತ ಮಾಡಿ, ಕಾಮಗಾರಿಯನ್ನು ಪುತ್ರರಿಗೇ ನೀಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಕೇಸ್ ದಾಖಲಾಗಿತ್ತು.. ಸದ್ಯ, ಬಿಜೆಪಿ ಶಾಸಕ ನೆಹರು ಓಲೇಕಾರ್ ಅವರಿಗೆ ಚುನಾವಣೆಯ ಹೊಸ್ತಿಲಲ್ಲಿ ಬಿಗ್ ರಿಲೀಫ್ ಸಿಕ್ಕಂತಾಗಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...