ಹಾನಗಲ್ ತಾಲೂಕಿನ ಶಿಕ್ಷಕ ಎಸ್.ಎಫ್.ಕಠಾರಿಗೆ ಉತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿ
ಹಾವೇರಿ: ಜಿಲ್ಲೆಯ ಹಾನಗಲ್ ತಾಲೂಕಿನ ದ್ಯಾಮನಕೊಪ್ಪ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸೋಮಪ್ಪ ಫಕ್ಕೀರಪ್ಪ ಕಠಾರಿ ಅವರು ರಾಜ್ಯ ಉತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಶಿಕ್ಷಣ ಇಲಾಖೆ 2023-24ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರ ಶನಿವಾರ ಪ್ರಕಟಿಸಿದೆ. ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.
ಈ ಪುರಸ್ಕೃತರ ಪಟ್ಟಿಯಲ್ಲಿಜಿಲ್ಲೆಯ ಹಾನಗಲ್ ತಾಲೂಕಿನ ದ್ಯಾಮನಕೊಪ್ಪ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಸ್.ಎಫ್.ಕಠಾರಿಅವರು ರಾಜ್ಯ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ ಯಾಗಿದ್ದು, ಸೆ.೫ರಂದು ಬೆಂಗಳೂರಲ್ಲಿನ ವಿಧಾನಸೌಧದ ಬ್ಲಾಂಕ್ವೆಟ್ ಹಾಲ್ ನಲ್ಲಿನಡೆಯುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪದಾನ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.