ಹಾವೇರಿ : ಅಂತಿಮ ಮತದಾರರ ಪಟ್ಟಿ ಪ್ರಕಟ- ಹೆಸರು ಪರಿಶೀಲನೆಗೆ ಸಲಹೆ
ಹಾವೇರಿ : ವಿಧಾನಸಭಾ ಮತದಾರರ ಪಟ್ಟಿ ಇಶೇಷ ಸಂಕ್ಷಿಪ್ತ ಪರಿಷ್ಕರಣೆ-೨೦೨೩, ಅರ್ಹತಾ ದಿನಾಂಕ ೦೧-೦೧-೨೦೨೩ಕ್ಕೆ ಸಂಬಂಧಿಸಿದಂತೆ ದಿನಾಂಕ ೦೫-೦೧-೨೦೨೩ ರಂದು ಜಿಲ್ಲೆಯಾದ್ಯಂತ ಎಲ್ಲ ವಿಧಾನಸಭಾ ಕ್ಷೇತ್ರಗಳ ಮತಗಟ್ಟೆಗಳಲ್ಲಿ, ಗ್ರಾಮ ಪಂಚಾಯತಿಗಳಲ್ಲಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ, ತಹಶೀಲ್ದಾರರ, ಉಪ “ಭಾಗಾಧಿಕಾರಿಗಳ ಮತ್ತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ ಮೂರ್ತಿ ಅವರು ತಿಳಿಸಿದ್ದಾರೆ.
ಈ ಅಂತಿಮ ಮತದಾರರ ಪಟ್ಟಿಗಳಲ್ಲಿ ಸಾರ್ವಜನಿಕರು ತಮ್ಮ ಹೆಸರು ಪ್ರಕಟವಾದ ಬಗ್ಗೆ ಪರಿಶೀಲಿಸಿಕೊಳ್ಳುವುದು ಮತ್ತು ಚುನಾವಣಾ ಆಯೋಗದ ಅಧೀಕೃತ ವೆಬ್ಸೈಟ್ https://ceo.karnataka.gov.in/ https://electoralsearch.in/ ನಲ್ಲಿಯೂ ಸಹ ತಮ್ಮ ಹೆಸರು ಪರಿಶೀಲಿಸಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Date: