ಹಾವೇರಿ : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ೧೦ ವಷ ಕಠಿಣ ಶಿಕ್ಷೆ

Date:

ಹಾವೇರಿ : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಅಸ್ಪಾಕ ಚಮನಸಾಬ ಕೋಟಿ ಎಂಬಾತನಿಗೆ ೧೦ ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ.೧.೬೦ ಲಕ್ಷ ದಂಡ ವಿಧಿಸಿ ವಿಶೇಷ ಸತ್ರ ನ್ಯಾಯಾಲಯ(ಎಫ್.ಟಿ.ಎಸ್.ಸಿ.-೧)ದ ನ್ಯಾಯಾಧೀಶರಾದ ನಿಂಗೌಡ ಪಾಟೀಲ ಅವರು ಸೋಮವಾರ ತೀರ್ಪು ನೀಡಿದ್ದಾರೆ.
ಆರೋಪಿ ಅಸ್ಪಾಕ ಚಮನಸಾಬ ಕೋಟಿ ಈತನು ೧೭ ಅಕ್ಟೋಬರ್ ೨೦೧೭ ರಂದು ಅಪ್ರಾಪ್ತ ಬಾಲಕಿಯು ತನ್ನ ಜಮೀನಿನಲ್ಲಿ ಒಬ್ಬಳೇ ಕೆಲಸಮಾಡುತ್ತಿದ್ದ ಸಮಯದಲ್ಲಿ ಆಸೆ ತೋರಿಸಿ, ಪುಸಲಾಯಿಸಿ ಬಾಲಕಿಯ ಇಚ್ಚೆಯ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿ, ಗರ್ಭಿಣಿಯನ್ನಾಗಿ ಮಾಡಿದ ಬಗ್ಗೆ ಆರೋಪಿತನ ಮೇಲೆ ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಹಾನಗಲ್ ವೃತ್ತದ ತನಿಖಾಧಿಕಾರಿ ಸಿಪಿಐ ಎಸ್.ಆರ್.ಗಣಾಚಾರಿ ಪ್ರಕರಣದ ತನಿಖೆ ನಡೆಸಿ ದೋಷರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಆರೋಪಿತನ ಮೇಲೆ ಹೊರಿಸಲಾದ ಆಪಾದನೆಗಳಾದ ಕಲಂ:೩೭೬(೨) (ಎನ್) ಭಾ.ದ.ಸಂ. ಮತ್ತು ಕಲಂ: ೬, ೪, ೧೨ ಫೋಕ್ಸೋ ಕಾಯ್ದೆ ೨೦೧೨ರಡಿಯಲ್ಲಿ ರುಜುವಾತಾದ ಹಿನ್ನಲೆಯಲ್ಲಿ ಆರೋಪಿ ಅಸ್ಪಾಕ ಚಮನಸಾಬ ಕೋಟಿ ಎಂಬಾತನಿಗೆ ೧೦ ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು ರೂ.೧.೬೦ ಲಕ್ಷ ದಂಡ ವಿಧಿಸಿದ್ದು, ದಂಡದ ಹಣದಲ್ಲಿ ನೊಂದ ಬಾಲಕಿಗೆ ರೂ. ಒಂದು ಲಕ್ಷ ಪರಿಹಾರ ಹಾಗೂ ಕರ್ನಾಟಕ ಸರ್ಕಾರದ ನೊಂದವರ ಪರಿಹಾರ ನಿಧಿ ಯೋಜನೆಯಡಿ ಇರುವ ಪರಿಹಾರ ನಿಧಿಯಿಂದ ರೂ. ನಾಲ್ಕು ಲಕ್ಷ ಪರಿಹಾರವನ್ನು ನೀಡಬೇಕು ಎಂದು ಆದೇಶಮಾಡಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ವಿಜಯಕುಮಾರ ಶಂಕರಗೌಡ ಪಾಟೀಲ ಅವರು ವಾದ ಮಂಡಿಸಿದ್ದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ ಹಾವೇರಿ: ೨೦೨೮ ವಿಧಾನಸಭೆ ಚುನಾವಣೆಯಲ್ಲಿ...

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...