ಹಾವೇರಿ ಜಿಲ್ಲೆಯಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ ೧೦೨

Date:

ಹಾವೇರಿ:- ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿದ್ದು, ಜನಸಾಮಾನ್ಯರ ಆತಂಕದಿಂದ ಆಸ್ಪತ್ರೆಗಳಲ್ಲಿ ತಪಾಸಣೆಗಾಗಿ ಸರದಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಹಾವೇರಿ ಜಿಲ್ಲೆಯೊಂದರಲ್ಲಿಯೇ ಕಳೆದ ಒಂದುವರೆ ವರ್ಷದಲ್ಲಿ ಬರೋಬ್ಬರಿ ೧೦೨ ಜನರು ಹೃದಯಘಾತಕ್ಕೆ ಬಲಿಯಾಗಿದ್ದಾರೆಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.
ಅಂಕಿ ಸಂಖ್ಯೆಗಳ ಪ್ರಕಾಶ ೨೦೨೪- ೨೫ ರಲ್ಲಿ ೭೮ ಜನ ಹೃದಯಘಾತದಿಂದ ಸಾವನ್ನಪ್ಪಿದರೆ, ೨೦೨೫ರ ಪ್ರಸಕ್ತ ಸಾಲಿನ ಜುಲೈ ಅಂತ್ಯದವರೆಗೆ ೨೪ ಜನ ಸಾವನ್ನಪ್ಪಿದ್ದು ಒಟ್ಟು ೧೦೨ ಜನರು ಹೃದಯ ಹಿಂಡುವ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ನಿನ್ನೆ ಇಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಎಲ್ಲಾ ಪ್ರಕರಣಗಳಲ್ಲೂ ಅಸ್ವಸ್ಥರಾದ ಕೆಲವೇ ನಿಮಿಷಗಳಲ್ಲಿ ಪ್ರಾಣವಾಯು ಹಾರಿಹೋಗಿರುವುದು, ಪ್ರಾಥಮಿಕ ಚಿಕಿತ್ಸೆಗೂ ಅವಕಾಶವಿಲ್ಲದಂತೆ ಸಾವಿನ ಸರಣಿಗಳಾಗುತ್ತಿರುವುದು ಆತಂಕ ಮೂಡಿಸಿದೆ.
ಆಸ್ಪತ್ರೆಗಳ ಮೇಲೆ ಹೆಚ್ಚಿದ ಒತ್ತಡ : ಬಹುತೇಕ ಸಣ್ಣ ವಯಸ್ಸಿನವರೇ ಸಾವನ್ನಪ್ಪುತ್ತಿದ್ದಾರೆ. ಯುವಕರು-ಯುವತಿಯರು ಎಂಬ ಬೇಧವಿಲ್ಲದೆ ಸರಣಿ ಸಾವುಗಳಾಗುತ್ತಿವೆ. ಇದರಿಂದಾಗಿ ಜನರಲ್ಲಿ ಆತಂಕ ಮನೆಮಾಡಿದೆ. ಜನತೆ ಸಣ್ಣಪುಟ್ಟ ಅಸ್ವಸ್ಥತೆಗಳಿಗೂ ತಪಾಸಣೆಗಾಗಿ ಹೃದ್ರೋಗ ತಜ್ಞರ ಬಳಿ ದಾಂಗುಡಿ ಇಡುತ್ತಿದ್ದಾರೆ.
ಸೌಲಭ್ಯಗಳ ಕೊರತೆ : ಹೃದಯಾಘಾತ ಎಂಬುದು ಸಮಯವಕಾಶವನ್ನೇ ನೀಡದೇ ಜೀವಹತ್ಯೆ ಮಾಡುತ್ತಿದ್ದು, ಬಹಳಷ್ಟು ಪ್ರಕರಣಗಳಲ್ಲಿ ತತ್‌ಕ್ಷಣಕ್ಕೆ ಸೂಕ್ತ ಚಿಕಿತ್ಸೆ ಪಡೆಯದೆ ಸಾವುಗಳಾಗಿವೆ. ಆಂಬುಲೆನ್‌ಸ ಸೇವೆ ಹಾಗೂ ಪ್ರಾಥಮಿಕ ಚಿಕಿತ್ಸೆಯ ಕೊರತೆ ಬಹಳಷ್ಟು ಪ್ರಕರಣಗಳಲ್ಲಿ ಕಂಡುಬಂದಿದೆ. ರಾಜ್ಯಸರ್ಕಾರ ಪುನೀತ್ ರಾಜ್‌ಕುಮಾರ್ ಹೆಸರಿನಲ್ಲಿ ಹೃದಯಜ್ಯೋತಿ ಯೋಜನೆಯನ್ನು ಆರಂಭಿಸಿದೆ. ಇದು ತುರ್ತು ಸಂದರ್ಭದಲ್ಲಿ ಜನರ ಜೀವ ಉಳಿಸಲು ಅನುಕೂಲವಾಗುವಂತಹ ಸಲಕರಣೆಗಳನ್ನು ಒದಗಿಸುವ ಮೂಲ ಉದ್ದೇಶ ಹೊಂದಿದೆ. ಆದರೆ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಬಂದಿರುವ ಬಗ್ಗೆ ಅನುಮಾನಗಳಿವೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಮೊಬೈಲ್ ಮಕ್ಕಳು ಸಮಾಜಮುಖಿಗಳಾಗುವುದಿಲ್ಲ :ಕೆ.ವಿ.ಪ್ರಭಾಕರ್  

ಮೊಬೈಲ್ ಮಕ್ಕಳು ಸಮಾಜಮುಖಿಗಳಾಗುವುದಿಲ್ಲ :ಕೆ.ವಿ.ಪ್ರಭಾಕರ್     ಹಾವೇರಿ : ರಾಗಿಕಾಳಿಗೆ ಭೂಮಿಯನ್ನೇ...

ಹಾವೇರಿಯ ಗೆಳೆಯರ ಬಳಗಕ್ಕೆ ಪ್ರತಿಷ್ಠಿತ ರಾ.ಹ. ದೇಶಪಾಂಡೆ ಪ್ರಶಸ್ತಿಯ ಸಂಭ್ರಮ

  ಹಾವೇರಿಯ ಗೆಳೆಯರ ಬಳಗಕ್ಕೆ ಪ್ರತಿಷ್ಠಿತ ರಾ.ಹ. ದೇಶಪಾಂಡೆ ಪ್ರಶಸ್ತಿಯ ಸಂಭ್ರಮ ಹಾವೇರಿ _...

“ಎಕ್ಕ ಪೈಸಾ ವಸೂಲಿ ಪಕ್ಕಾ”

"ಎಕ್ಕ ಪೈಸಾ ವಸೂಲಿ ಪಕ್ಕಾ" ಬಹುದಿನಗಳ ನಂತರ ಪಕ್ಕಾ ಪೈಸಾ ವಸೂಲಿ ಎನ್ನಬಹುದಾದ...

ಹಾವೇರಿ ಜಿಲ್ಲೆಯ ನೂತನ ಹಾಗೂ ಪ್ರಥಮ ಮಹಿಳಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಯಶೋದಾ ರೆಡ್ಡಿ ವಂಟಗೋಡಿ ಅಧಿಕಾರ ಸ್ವೀಕಾರ

ಹಾವೇರಿ ಜಿಲ್ಲೆಯ ನೂತನ ಹಾಗೂ ಪ್ರಥಮ ಮಹಿಳಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಯಶೋದಾ...