ಹಾವೇರಿ ಜಿಲ್ಲೆಯಲ್ಲಿ ನಿರಂತರ ಮಳೆ: ಜು.೨೬ ಮತ್ತು ೨೭ ರಂದು ಅಂಗನವಾಡಿ-ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಡಿಸಿ ಆದೇಶ
ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.೨೬ ಮತ್ತು ೨೭ ರಂದು ಅಂಗನವಾಡಿ-ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವಿಜಯಮಾಹಂತೇಶ ದಾನಮ್ಮನವರ ಗುರುವಾರ ಸಂಜೆ ಆದೇಶ ಹೊರಡಿಸಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಹಾಗೂ ಶೀತಗಾಳಿ ಬೀಸುತ್ತಿರುವುದರಿಂದ ಅಂಗನವಾಡಿ ಕೇಂದ್ರಗಳ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಮಕ್ಕಳ ಆರೋಗ್ಯ/ ಸುರಕ್ಷತೆಯ ಹಿತದೃಷ್ಟಿಯಿಂದ ದಿನಾಂಕ:೨೬-೦೭-೨೦೨೪ ಮತ್ತು ೨೭-೦೭-೨೦೨೪ ರಂದು ಎರಡು ದಿನ ರಜೆ ಘೋಷಿಸಲು ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾವೇರಿ ಹಾಗೂ ಉಪ ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಹಾವೇರಿ ಇವರು ಪ್ರಸ್ತಾವನೆಗಳನ್ನು ಸಲ್ಲಿಸಿರುತ್ತಾರೆ. ಸದರಿ ಯವರ ಕೋರಿಕೆಯಂತೆ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ರಜೆಯನ್ನು ಘೋಷಿಸುವುದು ಅವಶ್ಯವಿದೆ ಎಂದು ಮನವರಿಕೆಯಾಗಿದೆ ಕಾರಣ ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ ಕಲಂ ೩೪ (ಎಂ) ರಸ್ತೆಯ ಪ್ರದತ್ತವಾದ ಅಧಿಕಾರದನ್ವಯ ಹಾವೇರಿ ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳು ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಮುಂಜಾಗೃತ ಕ್ರಮವಾಗಿ ದಿನಾಂಕ:೨೬-೦೭-೨೦೨೪ ಮತ್ತು ೨೭-೦೭-೨೦೨೪ ರಂದು ಎರಡು ದಿನ ರಜೆ ಘೋಷಿಸಿ ಆದೇಶಿಸಿದೆ.
ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾವೇರಿ ಹಾಗೂ ಉಪ ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಹಾವೇರಿ ಇವರು ಈ ಆದೇಶವನ್ನು ಕಟ್ಟು ನಿಟ್ಟಾಗಿ ಪಾಲಿಸುವುದು ಹಾಗೂ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.