
ಹಾವೇರಿ ಜಿಲ್ಲೆಯಲ್ಲಿ ಬರ ಘೊಷಿಸಿ, ರೈತರ ನೆರವಿಗೆ ಧಾವಿಸಿ-ವೆಂಕಟೇಶ ನಾರಾಯಣಿ
ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯನ್ನು ತಕ್ಷಣವೇ ಬರಪೀಡಿತಜಿಲ್ಲೆಯೆಂದು ಘೋಷಿಸಬೇಕುಎಂದು ಬಿಜೆಪಿ ಮುಖಂಡ ವೆಂಕಟೇಶ ನಾರಾಯಣಿ ಆಗ್ರಹಿಸಿದರು. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಆರ್ಥಿಕ ವ್ಯವಸ್ಥೆಯು ರೈತರನ್ನೇ ಅವಲಂಬಿಸಿದ್ದು, ಸಕಾಲದಲ್ಲಿ ಮಳೆಯಾಗದ ಕಾರಣ ಬೆಳೆಗಳು ಹಾನಿಗೊಳಗಾಗಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ರೈತರ ನೆರವಿಗೆ ಧಾವಿಸಬೇಕೆಂದು ಅವರು ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಆರ್ಥಿಕ ವ್ಯವಸ್ಥೆಯು ರೈತರನ್ನೇ ಅವಲಂಬಿಸಿದ್ದು, ಸಕಾಲದಲ್ಲಿ ಮಳೆಯಾಗದ ಕಾರಣ ಬೆಳೆಗಳು ಹಾನಿಗೊಳಗಾಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ರೈತರ ನೆರವಿಗೆ ಧಾವಿಸಬೇಕೆಂದು ಒತ್ತಾಯಿಸಿದರು.
೨೦೨೫-೨೬ನೇ ಸಾಲಿನ ಬಾಕಿ ಉಳಿದಿರುವ ಬೆಳೆವಿಮೆ ಪರಿಹಾರವನ್ನು ಕೂಡಲೇ ರೈತರ ಖಾತೆಗಳಿಗೆ ಬಿಡುಗಡೆ ಮಾಡಬೇಕು. ಇತ್ತೀಚೆಗೆ ನಡೆಸಿದ ಮೋಡ ಬಿತ್ತನೆ ವೈಜ್ಞಾನಿಕ ರೀತಿಯಲ್ಲಿ ನಡೆದಿಲ್ಲ. ಮಳೆಯ ವಾತಾವರಣವಿದ್ದ ದಿನವೇ ಮೋಡ ಬಿತ್ತನೆ ನಡೆಸಿರುವುದರಿಂದ ಸಹಜವಾಗಿ ಬರಬೇಕಿದ್ದ ಮಳೆಯೂ ಬಾರದೆ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು. ಪ್ರಸ್ತುತ ಸಂಕಷ್ಟದ ಪರಿಸ್ಥಿತಿಯಲ್ಲಿ ಸರಕಾರ ತಕ್ಷಣವೇ ಬೆಳೆ ಪರಿಹಾರವನ್ನು ಘೋಷಿಸಬೇಕು. ಜಿಲ್ಲೆಯಲ್ಲಿ ನದಿಗಳಿಗೆ ನೀರು ಹರಿಯುವ ಸಂದರ್ಭದಲ್ಲೇ ಕೆರೆಗಳನ್ನು ತುಂಬಿಸುವ ಕಾರ್ಯಕ್ಕೆ ಜಿಲ್ಲಾಡಳಿತ ಆದ್ಯತೆ ನೀಡಬೇಕು ಎಂದು ಅವರು ಆಗ್ರಹಿಸಿದರು.
ಸಹಕಾರ ಸಂಘಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಕೃಷಿ ಸಾಲದ ಬಲವಂತದ ವಸೂಲಾತಿಯನ್ನು ಕೂಡಲೇ ಸ್ಥಗಿತಗೊಳಿಸಬೇಕು. ಬೆಳೆವಿಮೆ ಸ್ವಯಂ ಘೋಷಣಾ ಪತ್ರದ ನಿಯಮಗಳಲ್ಲಿ ಸಡಿಲಿಕೆ ತರಲು ರಾಜ್ಯ ಸರಕಾರವು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಬೇಕು ಎಂದು ಒತ್ತಾಯಿಸಿದರು. ಹಾವೇರಿ ಜಿಲ್ಲೆಯಲ್ಲಿ ಸುಮಾರು ಶೇ.೪೪ರಷ್ಟು ಮಳೆ ಕೊರತೆ ದಾಖಲಾಗಿದ್ದು, ಹಾವೇರಿ ತಾಲೂಕಿನಲ್ಲಿಯೂ ಇದೇ ಪ್ರಮಾಣದ ಕೊರತೆ ಇದೆ. ಆದ್ದರಿಂದ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸಬೇಕು. ಅಲ್ಲದೆ, ಜಿಲ್ಲೆಯ ನೀರಾವರಿ ಸಮಸ್ಯೆಗೆ ಶಾಶ್ವತ ಪರಿಹಾರವಾಗಿ ವರದಾ-ಬೇಡ್ತಿ ನದಿ ಜೋಡಣೆ ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸಬೇಕು ಎಂದು ವೆಂಕಟೇಶ ನಾರಾಯಣಿ ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಆನಂದ ಕಲಾಲ, ಶಿವಯೋಗಿ ಹುಲಿಕಂತಿಮಠ, ಆಂಜನೇಯ ಈಳಗೇರ, ಲಲಿತಾ ಗುಂಡೇನಹಳ್ಳಿ, ಹನುಮಂತಪ್ಪ ದಾಸರ, ಹರೀಶ ಇಂಗಳಗೊಂದಿ, ಮಂಜುನಾಥ ಮಲಗೋಡ, ಅಭಿಷೇಕ ಗುಡಗೂರ ಮತ್ತಿತರರು ಇದ್ದರು.

