ಹಾವೇರಿ -ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿ ಪ್ರಭುಸ್ವಾಮಿ ಬಾಳಿಹಳ್ಳಿಮಠಗೆ ೨೦ ವರ್ಷ ಜೈಲು

Date:

ಹಾವೇರಿ : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿ ಪ್ರಭುಸ್ವಾಮಿ ಶಿವಜೋಗಯ್ಯ ಬಾಳಿಹಳ್ಳಿಮಠ ಎಂಬಾತನಿಗೆ ೨೦ ವರ್ಷಗಳ ಕಠಿಣ ಕಾರಾವಾಸ ಶಿಕ್ಷೆ ಹಾಗೂ ರೂ.೬೭ ಸಾವಿರ ದಂಡ ವಿಧಿಸಿ ಹಾವೇರಿ ವಿಶೇ? ಸತ್ರ ನ್ಯಾಯಾಲಯ(ಎಫ್.ಟಿ.ಎಸ್.ಸಿ-೧)ದ ನ್ಯಾಯಾಧೀಶರಾದ ನಿಂಗೌಡ ಪಾಟೀಲ ಅವರು ಶುಕ್ರವಾರ ತೀರ್ಪು ನೀಡಿದ್ದಾರೆ.
ಪ್ರಭುಸ್ವಾಮಿ ಶಿವಜೋಗಯ್ಯ ಬಾಳಿಹಳ್ಳಿಮಠ ಎಂಬಾತ ಅಪ್ರಾಪ್ತ ಬಾಲಕಿ ಎಂದು ಗೊತ್ತಿದ್ದರೂ ಸಹ ಮದುವೆಯಾಗುವುದಾಗಿ ಮತ್ತು ಪ್ರೀತಿಸುವುದಾಗಿ ಹೇಳಿ ಪುಸಲಾಯಿಸಿ ದಿನಾಂಕ ೨೯-೦೪-೨೦೨೧ ರಂದು ರಾತ್ರಿ ೧೦-೩೦ಕ್ಕೆ ಕಡಕೋಳ ಬಸ್‌ನಿಲ್ದಾಣದಿಂದ ಅಪಹರಣಮಾಡಿಕೊಂಡು ಹೋಗಿ, ಮಂಗಳೂರು ಜಿಲ್ಲೆ ಸೂರತ್ಕಲ್ ತಾಲೂಕು ಕುಳೈ ಗ್ರಾಮದ ವ್ಯಾಪ್ತಿಯ ಒಂದು ಮನೆಯಲ್ಲಿ ಅಕ್ರಮ ಬಂಧನದಲ್ಲಿರಿಸಿ, ಬಾಲಕಿಯ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾದ ಕುರಿತು ಸವಣೂರ ಪೊಲೀಸ್ ಠಾಣೆ ಪೊಲೀಸ್ ಇನ್ಸಪೆಕ್ಟರ್ ದೇವಾನಂದ ಎಸ್ ಅವರು ಪ್ರಕರಣದ ತನಿಖೆ ನಡೆಸಿ ದೋಷರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಆರೋಪಿ ಪ್ರಭುಸ್ವಾಮಿ ಶಿವಜೋಗಯ್ಯ ಬಾಳಿಹಳ್ಳಿಮಠ ಮೇಲೆ ಹೊರಿಸಲಾದ ಆಪಾದನೆಗಳನ್ನು ಅಭಿಯೋಜನೆಯು ರುಜುವಾತುಪಡಿಸಿದ್ದರಿಂದ ನ್ಯಾಯಾಧೀಶರು ಮೇಲಿನಂತೆ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದ್ದು, ಸದರಿ ದಂಡದ ಹಣದಲ್ಲಿ ನೊಂದ ಬಾಲಕಿಗೆ ರೂ.೫೦ಸಾವಿರ ಪರಿಹಾರ ಹಾಗೂ ಕರ್ನಾಟಕ ಸರ್ಕಾರದ ನೊಂದವರ ಪರಿಹಾರ ನಿಧಿ ಯೋಜನೆಯಡಿ ಇರುವ ಪರಿಹಾರ ನಿಧಿಯಿಂದ ಕರ್ನಾಟಕ ಸರ್ಕಾರವು ನೊಂದ ಬಾಲಕಿಗೆ ರೂ. ೪,೦೦,೦೦೦/- ಗಳ ಪರಿಹಾರ ನೀಡಬೇಕೆಂದು ಎಂದು ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ವಿಶೇ? ಸರ್ಕಾರಿ ಅಭಿಯೋಜಕ(ಪೋಕ್ಸೋ) ವಿಜಯಕುಮಾರ ಶಂಕರಗೌಡ ಪಾಟೀಲ್ ಪ್ರಕರಣ ನಡೆಸಿ ವಾದ ಮಂಡಿಸಿದ್ದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...

ಹಾವೇರಿ :  ಏಪ್ರಿಲ್ ೧ರಿಂದ ೧೫ರವರೆಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ: ಡಿಸಿ ಡಾ. ವಿಜಯಮಾಹಾಂತೇಶ್ 

ಹಾವೇರಿ :  ಏಪ್ರಿಲ್ ೧ರಿಂದ ೧೫ರವರೆಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ...