
ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ
-ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ
ಹಾವೇರಿ.ಮಾ.೨೭(ಕರ್ನಾಟಕ ವಾರ್ತೆ): ಪ್ರಸಕ್ತ ೨೦೨೫-೨೬ನೇ ಸಾಲಿನ ಹಿಂಗಾರು ಹಂಗಾಮಿನ ಅವಧಿಯಲ್ಲಿ ರೈತರು ಬೆಳೆದ ಮಾಲ್ದಂಡಿ/ಹೈಬ್ರೀಡ್ ಜೋಳದ ಹುಟ್ಟುವಳಿ ಖರೀದಿಸಲು ಜಿಲ್ಲೆಯಲ್ಲಿ ನಾಲ್ಕು ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಖಾರಿ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದ್ದಾರೆ.
ಖರೀದಿ ಕೇಂದ್ರಗಳು: ಹಾವೇರಿ, ರಾಣೇಬೆನ್ನೂರು, ಶಿಗ್ಗಾಂವ ಹಾಗೂ ಸವಣೂರ ಎಪಿಎಂಸಿ ಯಾರ್ಡ್ಗಳಲ್ಲಿ ಖರೀದಿ ಕೇಂದ್ರ ಆರಂಭಿಸಲಾಗಿದೆ. ಪ್ರತಿ ರೈತರಿಂದ ಎಕರೆ ೧೫ ಕ್ವಿಂಟಾಲ್ನಂತೆ ಗರಿಷ್ಠ ೧೫೦ ಕ್ವಿಂಟಾಲ್ ಜೋಳವನ್ನು ಬೆಂಬಲಬೆಲೆ ಯೋಜನೆಯಡಿ ಖರೀದಿಸಲಾಗುತ್ತಿದೆ. ರೈತರು ದಿನಾಂಕ ೩೧-೦೩-೨೦೨೬ ರೊಳಗಾಗಿ ನೋಂದಣಿ ಮಾಡಿಕೊಳ್ಳಬೇಕು. ವಿಳಂಬವಾದರೆ ನೋಂದಣಿ ಮಾಡಿಕೊಳ್ಳಲಾಗುವುದಿಲ್ಲ. ಜಿಲ್ಲೆಯ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಪ್ರಕಟಣೆಯಲ್ಲಿ ಎಂದು ತಿಳಿಸಿದ್ದಾರೆ.

