೫೨ ಕೋಟಿ ರೂ. ವೆಚ್ಚದಲ್ಲಿ ಮದಗ-ಮಾಸೂರು ಕೆರೆ ನಾಲೆಗಳ ದುರಸ್ತಿ: ಸಚಿವ ಸಂಪುಟ ಅಸ್ತು

Date:

೫೨ ಕೋಟಿ ರೂ. ವೆಚ್ಚದಲ್ಲಿ ಮದಗ-ಮಾಸೂರು ಕೆರೆ ನಾಲೆಗಳ ದುರಸ್ತಿ:
ಸಚಿವ ಸಂಪುಟ ಅಸ್ತು
ಹಾವೇರಿ: ರಟ್ಟಿಹಳ್ಳಿ ತಾಲೂಕು ಮದಗ-ಮಾಸೂರು ಕೆರೆಯ ಎಡದಂಡೆ ಹಾಗೂ ಬಲದಂಡೆ ಮುಖ್ಯ ನಾಲೆಗಳನ್ನು ಆಧುನೀಕರಣಗೊಳಿಸುವ ೫೨.೨೦ ಕೋಟಿ ರೂ. ಅಂದಾಜು ವೆಚ್ಚದ ಕಾಮಗಾರಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಮಾಸೂರು ಗ್ರಾಮದ ಬಳಿ ಕುಮದ್ವತಿ ನದಿಗೆ ಅಡ್ಡಲಾಗಿ ಮದಗ – ಮಾಸೂರು ಕೆರೆ ಇದ್ದು, ೧೪ನೇ ಶತಮಾನದಲ್ಲಿ ವಿಜಯನಗರ ಅರಸರ ಕಾಲದಲ್ಲಿಅಣೆಕಟ್ಟೆ ನಿರ್ಮಿಸಲಾಗಿದೆ. ಈ ಕೆರೆಯ ನೀರು ಸಂಗ್ರಹಣಾ ಸಾಮರ್ಥ್ಯ ೦.೦೫೬ ಟಿಎಂಸಿ ಇದ್ದು ೦.೭೧೮ ಬಳಕೆಯೊಂದಿಗೆ ೭೧೫ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ.
ಈ ಕೆರೆಯ ಎಡದಂಡೆ ಕಾಲುವೆ ೧೧ ಕಿಮೀ ಉದ್ದ ಮತ್ತು ಬಲದಂಡೆ ಕಾಲುವೆಯು ೧೩.೦೭೫ ಉದ್ದ ಇದ್ದು, ಕ್ರಮವಾಗಿ ೨೪೩ ಹಾಗೂ ೪೨೭ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ. ಈ ಕಾಲುವೆಗಳು ೧೮೬೨ರಲ್ಲಿ ನಿರ್ಮಾಣಗೊಂಡಿದ್ದು, ಈಗ ಆಕಾರ ಕಳೆದುಕೊಂಡಿವೆ. ನಾಲೆಯ ಕೆಲವು ಭಾಗಗಳಲ್ಲಿ ಕೊರಕಲು ಉಂಟಾಗಿದೆ. ಕೆಲವು ಕಡೆ ಗಿಡಗಳು ಬೆಳೆದಿದ್ದು, ಹೂಳು ತುಂಬಿದೆ. ಗೇಟುಗಳು ಶಿಥಿಲಗೊಂಡಿವೆ. ಈ ಎಲ್ಲ ಕಾರಣಗಳಿಂದ ನೀರು ಪೋಲಾಗುತ್ತಿದ್ದು, ಅಚ್ಚುಕಟ್ಟು ಕೊನೆಯ ಭಾಗದ ಜಮೀಣಿಗೆ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ . ಈ ಹಿನ್ನೆಲೆಯಲ್ಲಿ ಹಿರೇಕೆರೂರು ಶಾಸಕ ಯು.ಬಿ. ಬಣಕಾರ್ ಹಾಗೂ ರೈತರು ಕಾಲುವೆ ಆಧುನೀಕರಣಕ್ಕೆ ಸರ್ಕಾರವನ್ನು ಒತ್ತಾಯಿಸಿದ್ದರು. ಹೀಗಾಗಿ ಮದಗ – ಮಾಸೂರು ಕೆರೆಯ ಮುಖ್ಯ ನಾಲೆಗಳ ಆಧುನೀಕರಣ ಕಾಮಗಾರಿಯೊಂದಿಗೆ ಕೆಲವು ಹೆಚ್ಚುವರಿ ಸಿ.ಡಿ. ಕಾಮಗಾರಿಗಳನ್ನು ಕೈಗೊಳ್ಳಲು ೫೨.೨೦ ಕೋಟಿ ರೂ. ವೆಚ್ಚದ ಯೋಜನೆ ರೂಪಿಸಲಾಗಿದೆ.
ರೈತರ ಬೇಡಿಕೆಯಂತೆ ಈ ಯೋಜನೆಯಲ್ಲಿ ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ಆಧುನೀಕರಣ ಮತ್ತು ದುರಸ್ತಿ, ಹೆಚ್ಚುವರಿ ಸಿ.ಡಿ. ಕಾಮಗಾರಿ, ತೂಗುಕಾಲುವೆ, ರಸ್ತೆ ಸೇತುವೆಗಳ ದುರಸ್ತಿ ಹಾಗೂ ಪುನರ್‌ನಿರ್ಮಾಣ, ಕ್ಯಾಟಲ್ ರ್ಯಾಂಪ್, ಕೆನಾಲ್ ಕ್ರಾಸಿಂಗ್ ಕಾಮಗಾರಿಗಳು ಸೇರಿವೆ ಎಂದು ಸಚಿವರು ವಿವರಿಸಿದ್ದಾರೆ.
ನಾಲೆಗಳ ಆಧುನೀಕರಣ ಯೋಜನೆಯ ವಿವರವಾದ ಯೋಜನಾ ವರದಿಯನ್ನು ಕಳೆದ ವರ್ಷ ಆಗಸ್ಟ್ ೨೨ರಂದು ನಡೆದ ನಿಗಮದ ಅಂದಾಜು ಪರಿಶೀಲನಾ ಸಮಿತಿಯು ಮಂಡಿಸಿದ್ದು, ಸಮಿತಿಯು ೫೨.೨೦ ಕೋಟಿ ರೂ. ಅಂದಾಜು ವೆಚ್ಚದ ಪ್ರಸ್ತಾವನೆಗೆ ನಿಗಮದ ನಿರ್ದೇಶಕ ಮಂಡಳಿ ಅನುಮೋದನೆ ಪಡೆದು ಆಡಳಿತಾತ್ಮಕ ಅನುಮೋದನೆ ಪಡೆಯಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಈ ಯೋಜನೆಗೆ ಪ್ರಸಕ್ತ ಸಾಲಿನಲ್ಲಿ ಮೂರನೇ ಒಂದು ಭಾಗ ಅನುದಾನದ ಅವಕಾಶ ಮಾಡಿಕೊಂಡು ೨೦೨೫-೨೬ನೇ ಸಾಲಿನ ಕ್ರಿಯಾ ಯೋಜನೆಯಲ್ಲಿ ಅಳವಡಿಸಕೊಳ್ಳಲಾಗುವುದು ಎಂದು ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ವರದಿ ಮಾಡಿದ್ದಾರೆ ಎಂದು ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿಗೆ 2 “ಮಕ್ಕಳ ಚಂದಿರ ಪ್ರಶಸ್ತಿ”

ಕಾಡುಮೇಡು ಹಾಗೂ ಬೆರಗು ಕೃತಿಗಳಿಗೆ 2023ನೇ ಸಾಲಿನ ಪ್ರಶಸ್ತಿ ಪ್ರಕಟ ಹಾವೇರಿಗೆ 2...

ಹಾವೇರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ವರ್ಣರಂಜಿತ ತೆರೆ

ಹಾವೇರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ವರ್ಣರಂಜಿತ ತೆರೆ ಸದೃಢವಾದ ದೇಹಕ್ಕೆ ಸದೃಢವಾದ...